ಹಾರಂಗಿಯಲ್ಲಿ ಹೆಚ್ಚು ನೀರು ಸಂಗ್ರಹಿಸದಂತೆ ಶಾಸಕ ಅಪ್ಪಚ್ಚುರಂಜನ್ ಸೂಚನೆ

20/09/2020

ಮಡಿಕೇರಿ : ಹಾರಂಗಿ ಅಣೆಕಟ್ಟೆಗೆ ಹೆಚ್ಚು ನೀರು ಹರಿದು ಬರುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚು ನೀರು ಸಂಗ್ರಹಿಸದಂತೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಜಲಾಶಯದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಲಾಶಯಕ್ಕೆ ಒಳಹರಿವಿನ ಪ್ರಮಾಣವನ್ನು ಕ್ರಮಬದ್ಧವಾಗಿ ನೋಡಿಕೊಂಡು ಹೆಚ್ಚುವರಿ ನೀರನ್ನು ನದಿಗೆ ಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಕುಶಾಲನಗರ ಸುತ್ತಮುತ್ತ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.