ಕೊಡಗಿನಲ್ಲಿ ಪೊಲೀಸ್ ಹುದ್ದೆಗಾಗಿ 2756 ಅಭ್ಯರ್ಥಿಗಳು ಪರೀಕ್ಷೆ ಬರೆದರು

September 20, 2020

ಮಡಿಕೇರಿ ಸೆ.20 : ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ನಾಗರಿಕ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಂದು ಮಡಿಕೇರಿಯ 8 ಮತ್ತು ಕುಶಾಲನಗರದ 4 ಸೇರಿದಂತೆ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಿತು.
ಜಿಲ್ಲೆಯಲ್ಲಿನ ನಾಗರಿಕ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಾಗಿ ಒಟ್ಟು 2756 ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಹಾಜರಾಗಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ತಿಳಿಸಿದ್ದಾರೆ.

error: Content is protected !!