ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಗಿಲ್ಬರ್ಟ್ ಲೋಬೋ ಆಯ್ಕೆ

20/09/2020

ಮಡಿಕೇರಿ ಸೆ.20 : ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಗಿಲ್ಬರ್ಟ್ ಲೋಬೋ ಆಯ್ಕೆಯಾಗಿದ್ದಾರೆ.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ರಫೀಕ್ ಅಹಮ್ಮದ್ ಅವರು ನೂತನ ಜವಬ್ದಾರಿಯನ್ನು ಗಿಲ್ಬರ್ಟ್ ಅವರಿಗೆ ವಹಿಸಿದರು. ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷÀ ಎಂ.ಎ.ಉಸ್ಮಾನ್, ವಕ್ಫ್ ಸಲಹಾ ಸಮಿತಿಯ ಜಿಲ್ಲಾಧ್ಯಕ್ಷ ಕೆ.ಎ.ಯಾಕುಬ್, ಬ್ಲಾಕ್ ಅಧ್ಯಕ್ಷ ಕಲೀಲ್ ಬಾಷಾ ಮತ್ತಿತರ ಹಿರಿಯ ಕಾಂಗ್ರೆಸ್ ಮುಖಂಡರು ಈ ಸಂದರ್ಭ ಹಾಜರಿದ್ದರು.
ಗಿಲ್ಬರ್ಟ್ ಲೋಬೊ ಅವರು ಸುಮಾರು 40 ವರ್ಷಗಳಿಂದ ಕಾಂಗ್ರೆಸ್ಸಿನ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿಯುತ್ತಿದ್ದು, ಮಡಿಕೇರಿ ನಗರ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ. ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ನಗರಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಅನುಭವ ಹೊಂದಿರುವ ಗಿಲ್ಬರ್ಟ್ ಅವರು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ನ್ಯಾಯ ಒದಗಿಸಲಿದ್ದಾರೆ ಎಂದು ಎಂ.ಎ.ಉಸ್ಮಾನ್ ತಿಳಿಸಿದರು.