ಮುಂಜಾಗೃತಾ ಕ್ರಮಕ್ಕೆ ಸಿಎಂ ಸೂಚನೆ

21/09/2020

ಬೆಂಗಳೂರು ಸೆ.21 : ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಜಿಲ್ಲೆಯಲ್ಲಿ ಮಳೆ ತೀವ್ರತೆಯನ್ನು ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ, ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುವುದು ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತ ಅವರಿಗೆ ಕರೆ ಮಾಡಿ, ರಾಜ ಕಾಲುವೆ, ತಗ್ಗು ಪ್ರದೇಶಗಳಲ್ಲಿ ವಿಶೇಷ ಗಮನಹರಿಸುವಂತೆ ಸೂಚನೆ ನೀಡಿದ್ದು, ಎಲ್ಲಾ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಿ ಅಂತ ಆದೇಶಿಸಿದ್ದಾರೆ.