ಶಿಕ್ಷಣ ನೀತಿ ಬಗ್ಗೆ ರಾಷ್ಟ್ರಪತಿ ವಿಶ್ವಾಸ

21/09/2020

ನವದೆಹಲಿ ಸೆ.21 : ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಶಿಕ್ಷಣ ನೀತಿಯ ಅಗತ್ಯತೆಯನ್ನು ಮರು ಹೊಂದಾಣಿಕೆ ಮಾಡುವ ಜೊತೆಗೆ 21ನೇ ಶತಮಾನದ ಅವಶ್ಯಕತೆಗಳನ್ನು ಸಮಗ್ರವಾಗಿ ಪೂರೈಸಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಉನ್ನತ ಶಿಕ್ಷಣ ಕುರಿತ ಸಮ್ಮೇಳನ ದೆಹಲಿಯಲ್ಲಿ ವರ್ಚುವೆಲ್ ವೇದಿಕೆ ಮೂಲಕ ಪಾಲ್ಗೊಂಡು ಮಾತನಾಡಿದ ಅವರು, ಉಜ್ವಲ ಜ್ಞಾನ, ಸಮಾನ ಅಭಿವೃದ್ಧಿಯ ದೃಷ್ಟಿಕೋನವನ್ನು ಇದು ಒಳಗೊಂಡಿದ್ದು, ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಒದಗಿಸಲಿದೆ ಎಂದರು. ಈ ನೀತಿ ಹಲವು ಆಯಾಮಗಳನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳ ಆಲೋಚನಾ ಕ್ರಮದಲ್ಲಿ ಸಮಗ್ರ ಬದಲಾವಣೆ ತರಲಿದೆ. ಕ್ರಿಯಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡುವ ಗುಣಮಟ್ಟದ ಪಾಠ ಪ್ರವಚನಕ್ಕೆ ಗಮನ ಹರಿಸಲಿದೆ ಎಂದು ಹೇಳಿದರು.