ಮಳೆ ಕಾರಣ ಪರೀಕ್ಷೆ ಮುಂದೂಡಿಕೆ

21/09/2020

ಮಂಗಳೂರು ಸೆ.21 : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ನಡೆಸಬೇಕಿದ್ದ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.
ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ (ಪರೀಕ್ಷೆ) ಡಾ.ಪಿ.ಎಲ್.ಧರ್ಮ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ, ಸೆ.21 ಸೋಮವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಸೆ.22 ರಂದು ನಡೆಯಲಿರುವ ಪರೀಕ್ಷೆಗಳ ಬಗ್ಗೆ ಸೋಮವಾರ ನಿರ್ಧಾರ ಪ್ರಕಟವಾಗಲಿದೆ. ಎರಡು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ.