ಕೊಡಗಿನಲ್ಲಿ ಕೋವಿಡ್ ನಿಂದ ಸಾವಿಗೀಡಾದವರ ಸಂಖ್ಯೆ 31 ಕ್ಕೆ ಏರಿಕೆ

September 21, 2020

ಮಡಿಕೇರಿ ಸೆ.21 : ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 12 ಹಾಗೂ ಮಧ್ಯಾಹ್ನ 25 ಸೇರಿದಂತೆ ಒಟ್ಟು 37 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಅಲ್ಲದೆ 75 ವರ್ಷದ ವೃದ್ಧರೊಬ್ಬರು ಕೋವಿಡ್ ನಿಂದ ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 2308ಕ್ಕೆ ಹಾಗೂ ಸತ್ತವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಸೋಂಕಿತರ ಪೈಕಿ 1872 ಮಂದಿ ಗುಣಮುಖರಾಗಿದ್ದು, 406 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 355ರಷ್ಟಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ವೀರಾಜಪೇಟೆ ತಾಲೂಕಿನ ಬಾಡಗ ಬಾಣಂಗಾಲ ನಿವಾಸಿ ಮೃತಪಟ್ಟವರು. ಈ ಹಿಂದಿನಿಂದಲೂ ಹೃದಯ ಮತ್ತು ಅಧಿಕ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದ ಅವರಲ್ಲಿ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮಡಿಕೇರಿಯ ಕೋವಿಡ್ ಆಸ್ಪತ್ರೆಯ ಐ.ಸಿ.ಯು.ನಲ್ಲಿ ಸೋಂಕಿತ ವೃದ್ಧರನ್ನು ದಾಖಲಿಸಲಾಯಿತ್ತಾದರು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

error: Content is protected !!