ಕೊಡಗು ಜಿಲ್ಲೆಯ ಮಳೆ ವಿವರ

ಮಡಿಕೇರಿ ಸೆ.21: ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಸೋಮವಾರ ಬೆಳಗಿನ ವೇಳೆಯಲ್ಲಿ ಧಾರಾಕಾರ ಮಳೆ ಸುರಿಯಿತು. ಜಿಲ್ಲೆಯ ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಸಂಪಾಜೆ, ವಿರಾಜಪೇಟೆ, ಶಾಂತಳ್ಳಿ, ಸೋಮವಾರಪೇಟೆ ಮತ್ತಿತರ ಭಾಗಗಳಲ್ಲಿ ವ್ಯಾಪಕ ಮಳೆಯಾಗಿದೆ. ಚಳಿ, ಗಾಳಿ ನಡುವೆ ಮಳೆ ಮುಂದುವರಿದೆ.
ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 64.19 ಮಿ.ಮೀ. ಕಳೆದ ವರ್ಷ ಇದೇ ದಿನ 7.32 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2266.82 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2509.77 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 92.90 ಮಿ.ಮೀ. ಕಳೆದ ವರ್ಷ ಇದೇ ದಿನ 8 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3222.09 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3422.57 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 47.45 ಮಿ.ಮೀ. ಕಳೆದ ವರ್ಷ ಇದೇ ದಿನ 13.97 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2046.05 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2390.81 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 52.23 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1532.35 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1715.94 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 96.40, ನಾಪೋಕ್ಲು 80.20, ಸಂಪಾಜೆ 60, ಭಾಗಮಂಡಲ 135, ವಿರಾಜಪೇಟೆ ಕಸಬಾ 62.20, ಹುದಿಕೇರಿ 62, ಶ್ರೀಮಂಗಲ 60, ಪೊನ್ನಂಪೇಟೆ 32, ಅಮ್ಮತ್ತಿ 43.50, ಬಾಳೆಲೆ 25, ಸೋಮವಾರಪೇಟೆ ಕಸಬಾ 54, ಶನಿವಾರಸಂತೆ 27, ಶಾಂತಳ್ಳಿ 131.20, ಕೊಡ್ಲಿಪೇಟೆ 50.20, ಕುಶಾಲನಗರ 20, ಸುಂಟಿಕೊಪ್ಪ 31 ಮಿ.ಮೀ.ಮಳೆಯಾಗಿದೆ.
