ಹಾರಂಗಿಯಿಂದ 11,854 ಕ್ಯುಸೆಕ್ ನೀರು ಬಿಡುಗಡೆ

21/09/2020

ಮಡಿಕೇರಿ : ನಿರಂತರ ಮಳೆಯಿಂದ ಕಾವೇರಿ ಸೇರಿದಂತೆ ಉಪ ನದಿಗಳು ತುಂಬಿ ಹರಿಯುತ್ತಿದ್ದು, ಹಾರಂಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಾಗಿರುವುದರಿಂದ 11,854 ಕ್ಯುಸೆಕ್ ನೀರನ್ನು ನದಿಗೆ ಹರಿಯ ಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ನದಿಗೆ 1675 ಕ್ಯುಸೆಕ್ ಬಿಡಲಾಗಿತ್ತು. ಇಂದಿನ ನೀರಿನ ಒಳಹರಿವು 8666 ಕ್ಯುಸೆಕ್ ಆಗಿದೆ. ಹಾರಂಗಿ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ 15.20 ಮಿ.ಮೀ ಮಳೆಯಾಗಿದೆ.
ಕೊಡಗು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಮಳೆ 2266.82 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2509.77 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ 3222.09 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3422.57 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ 2046.05 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2390.81 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ 1532.35 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1715.94 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯ ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ. ಜಿಲ್ಲಾಡಳಿತ ಪರಿಸ್ಥಿತಿ ನಿಭಾಯಿಸಲು ಸಜ್ಜಾಗಿದ್ದು, ತುರ್ತು ಸಂದರ್ಭಗಳಲ್ಲಿ ಜಿಲ್ಲಾಧಿಕಾರಿಗಳ 24*7 ಕಂಟ್ರೋಲ್ ರೂಂ ಸಂಖ್ಯೆ 0827-221077, ವ್ಯಾಟ್ಸ್‍ಆಪ್ ಸಂಖ್ಯೆ 8550001077 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.