ಸೆ. 23 ರಂದು ಡಿಎಸ್‍ಎಸ್‍ನಿಂದ ಪ್ರತಿಭಾನ್ವಿತ ದಲಿತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

22/09/2020

ಮಡಿಕೇರಿ ಸೆ. 22 : ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಸೆ. 23 ರಂದು ಪ್ರತಿಭಾನ್ವಿತ ದಲಿತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಮಧ್ಯಾಹ್ನ 2 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮುಖ್ಯ ಭಾಷಣಕಾರರಾಗಿ ಜಿಲ್ಲಾ ಕಾನೂನು ಸೇವಾ ಪ್ರಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಯಾದ ನೂರುನ್ನೀಸ ಭಾಗವಹಿಸಲಿದ್ದು, ಅಪರ ಜಿಲ್ಲಾಧಿಕಾರಿ ಡಾ. ಸಿ.ವಿ. ಸ್ನೇಹಾ ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಕುಶಾಲನಗರದ ಅಂಚೆ ಇಲಾಖೆಯ ಅಧೀಕ್ಷಕ ಟಿ.ಪಿ. ಶ್ರೀನಿವಾಸ್, ಡಿಎಸ್‍ಎಸ್‍ನ ಮೈಸೂರು ಮತ್ತು ಕೊಡಗು ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ, ಜಿಲ್ಲಾ ಸಂಘಟನಾ ಸಂಚಾಲಕರಾದ ಹೆಚ್.ಜೆ. ಈರಪ್ಪ, ಹೆಚ್.ಪಿ. ಶಿವಕುಮಾರ್, ಮಡಿಕೇರಿ ತಾಲ್ಲೂಕು ಸಂಚಾಲಕ ಎ.ಪಿ. ದೀಪಕ್, ಮಡಿಕೇರಿ ನಗರ ಸಂಚಾಲಕ ಸಿದ್ದೇಶ್ವರ್ ಪಾಲ್ಗೊಳ್ಳಲಿದ್ದಾರೆ ಎಂದರು.