ಸೋಮವಾರಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಪಂಚಮಿ ಪೂಜೆ

September 22, 2020

ಮಡಿಕೇರಿ ಸೆ. 22 : ಸೋಮವಾರಪೇಟೆ ಸಮೀಪದ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಸಿನಕುಪ್ಪೆ ಗ್ರಾಮದಲ್ಲಿರುವ ಶ್ರೀಮಂಜುನಾಥ ಮತ್ತು ನವನಾಗ ಸನ್ನಿಧಿಯಲ್ಲಿ ಪಂಚಮಿ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ಕ್ಷೇತ್ರದ ಪ್ರಧಾನ ಗುರುಗಳಾದ ಶ್ರೀರಾಜೇಶ್‍ನಾಥ್‍ಜೀ ಅವರ ಮಾರ್ಗದರ್ಶನದಲ್ಲಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಬೆಳಗ್ಗಿನಿಂದ ಗಣಪತಿ ಹೋಮ, ರುದ್ರಾಭಿಷೇಕ ಸೇರಿದಂತೆ ವಿವಿಧ ಅಭಿಷೇಕ, ಅಲಂಕಾರ ಪೂಜೆ, ಮಹಾಮಂಗಳಾರತಿ ನೆರವೇರಿತು.
ನಂತರ ನವನಾಗ ಸನ್ನಿಧಿಯಲ್ಲಿ ವಿವಿಧ ಅಭೀಷೇಕ, ಪಂಚಮಿ ಪೂಜೆ, ವಿಶೇಷ ಅಲಂಕಾರ ಪೂಜೆ, ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ದೇವಾಲಯ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ನಾಪಂಡ ಮುತ್ತಪ್ಪ, ಕಾರ್ಯದರ್ಶಿ ಪ್ರಕಾಶ್, ದೇವಾಲಯ ಸಮಿತಿ ಅಧ್ಯಕ್ಷ ಮೋಹನ್ ಇದ್ದರು.