ತಮ್ಮ ಸರ್ಕಾರದ ವಿರುದ್ಧವೇ ಪ್ರತಿಭಟನೆ

September 23, 2020

ಬೆಂಗಳೂರು ಸೆ.23 : ಅತಿಥಿ ಉಪನ್ಯಾಸಕರಿಗೆ ವೇತನ ನೀಡದ ಸರ್ಕಾರದ ನಿಲುವನ್ನು ಖಂಡಿಸಿ ಆಡಳಿತ ಪಕ್ಷದ ಸದಸ್ಯರೇ ಸದನದ ಬಾವಿಗಿಳಿದು ಧರಣಿ ನಡೆಸಿದ ಅಪರೂಪದ ಘಟನೆ ಮಂಗಳವಾರ ವಿಧಾನ ಪರಿಷತ್ ನಲ್ಲಿ ನಡೆಯಿತು.
ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ಅತಿಥಿ ಉಪನ್ಯಾಸಕರ ವೇತನ ವಿಷಯ ಕುರಿತು ಪ್ರಸ್ತಾಪ ಮಾಡಿದ ಆಡಳಿತಾರೂಢ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್, ಸರ್ಕಾರಿ ಪದವಿ ಕಾಲೇಜಿನಲ್ಲಿ ಶೇ.70 ರಷ್ಟು ಅತಿಥಿ ಉಪನ್ಯಾಸಕರಿದ್ದಾರೆ. ಮಾರ್ಚ್ ನಿಂದ ಅವರಿಗೆ ವೇತನವನ್ನೇ ಕೊಟ್ಟಿಲ್ಲ. ಸರ್ಕಾರವನ್ನು ಕೇಳಿದರೆ ಅವರನ್ನು 10 ತಿಂಗಳಿಗೆ ಗುತ್ತಿಗೆ ಮೇಲೆ ನೇಮಕಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ ಸರ್ಕಾರದ್ದೇ ಸುತ್ತೋಲೆ ಇದೆ. ಕೋವಿಡ್ ಸಮಯದಲ್ಲಿ ವೇತನ ಕಡಿತ ಮಾಡಬಾರದೆಂಬ ಸೂಚನೆಯನ್ನು ಸರ್ಕಾರವೇ ನೀಡಿದೆ. ಆದರೂ ಉಪನ್ಯಾಸಕರಿಗೆ ವೇತನ ನೀಡಿಲ್ಲ. ಈವರೆಗೂ ಲಾಸ್ಟ್ ವರ್ಕಿಂಗ್ ಡೇ ಘೋಷಣೆ ಮಾಡಿಲ್ಲ ಎಂದು ತಮ್ಮದೇ ಸರ್ಕಾರದ ವಿರುದ್ಧ ವಾಗ್ದಾಳಿ .

error: Content is protected !!