ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ಸಮಿತಿಯ ಪ್ಯಾನಲಿಸ್ಟ್ ಆಗಿ ಟಿ.ಪಿ.ರಮೇಶ್ ನೇಮಕ

September 23, 2020

ಮಡಿಕೇರಿ ಸೆ.23 : ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಸಂವಹನ ಮತ್ತು ಮಾಧ್ಯಮ ಸಮಿತಿಯ ಪ್ಯಾನಲಿಸ್ಟ್ ಆಗಿ ಕೊಡಗು ಜಿಲ್ಲಾ ಕಾಂಗ್ರೆಸ್ ಮುಖಂಡ ಟಿ.ಪಿ.ರಮೇಶ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಮಾಧ್ಯಮ ಮತ್ತು ಸಂವಹನ ಕ್ಷೇತ್ರದಲ್ಲಿ ಇರುವ ತಿಳುವಳಿಕೆ ಹಾಗೂ ಅನುಭವದ ಆಧಾರದಲ್ಲಿ ನೂತನ ಜವಬ್ದಾರಿಯನ್ನು ನೀಡಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.
ಟಿ.ಪಿ.ರಮೇಶ್ ಅವರು ಕೊಡಗು ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾಗಿ, ಕೆಪಿಸಿಸಿ ಹಿಂದುಳಿದ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಕಳೆದ 15 ವರ್ಷಗಳಿಂದ ಕೆಪಿಸಿಸಿ ಸದಸ್ಯರಾಗಿ ಮತ್ತು ಪ್ರಸ್ತುತ ಕೆಪಿಸಿಸಿ ಸಂಯೋಜಕರಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

error: Content is protected !!