ಸೆ.26 ರಂದು ಅರಂತೋಡಿನಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

23/09/2020

ಮಡಿಕೇರಿ ಸೆ. 23 : ವಿವಿಧ ಸಂಘ, ಸಂಸ್ಥೆಗಳ ಸಹಭಾಗಿತ್ವದಲ್ಲಿ ಸೆ. 26 ರಂದು ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ, ರಕ್ತ ವರ್ಗೀಕರಣ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಕಾರ್ಯಕ್ರಮವು ಅರಂತೋಡಿನಲ್ಲಿ ನಡೆಯಲಿದೆ ಎಂದು ಸುಳ್ಯ ವಿಖಾಯ ಕ್ಲಸ್ಟರ್ ಕನ್ವೀನರ್ ತಾಜುದ್ದೀನ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ 9 ಗಂಟೆಗೆ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ದ.ಕ ಜಿಲ್ಲೆಯ ಎಸ್‍ಕೆಎಸ್‍ಎಸ್‍ಎಫ್ ವಿಖಾಯ ರಕ್ತದಾನಿ ಬಳಗ, ಸುಳ್ಯದ ಎಸ್‍ಕೆಎಸ್‍ಎಸ್‍ಎಫ್, ಅರಂತೋಡು ಶಾಖೆ ಹಾಗೂ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ, ಪಠೇಲ್ ಚಾರಿಟೇಬಲ್ ಟ್ರಸ್ಟ್, ಪಠೇಲ್ ಮೆಡಿಕಲ್ ಮತ್ತು ಲ್ಯಾಬೋರೇಟರಿ ಸುಳ್ಯ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು, ಕೆ.ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಶಿಬಿರ ನಡೆಯಲಿದೆ ಎಂದರು.

ಕಾರ್ಯಕ್ರಮವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ ಅಲ್ಹಾಜ್ ಇಸ್ಹಾಕ್ ಬಾಖವಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಎಸ್‍ಕೆಎಸ್‍ಎಸ್‍ಎಫ್ ಸುಳ್ಯ ಕ್ಲಸ್ಟರ್‍ನ ಅಧ್ಯಕ್ಷ ಅಬ್ದುಲ್ ರಝಾಕ್ ವಹಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಎಸ್‍ಕೆಎಸ್‍ಎಸ್‍ಎಫ್ ಜಿಲ್ಲಾಧ್ಯಕ್ಷ ಸಯ್ಯದ್ ಅಮೀರ್ ತಂಙಳ್, ವಿಖಾಯ ಚೇರ್ಮನ್ ಸಯ್ಯದ್ ಇಸ್ಮಾಯಿಲ್ ತಂಙಳ್, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಅಧ್ಯಕ್ಷ ಟಿ.ಎಮ್.ಶಹೀದ್, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಎಂ.ಬಿ.ಪೌಂಡೇಶನ್ ಅಧ್ಯಕ್ಷ ಎಂ.ಬಿ.ಸದಾಶಿವ, ಎಸ್‍ಕೆಎಸ್‍ಎಸ್‍ಎಫ್ ಸುಳ್ಯ ವಲಯ ಅಧ್ಯಕ್ಷ ಕೆ.ಎಸ್.ಜಮಾಲುದ್ದೀನ್ ಬೆಳ್ಳಾರೆ, ವಿಖಾಯ ಚೇರ್ಮನ್ ಶರೀಫ್ ಅಜ್ವಾವರ ಭಾಗವಹಿಸಲಿದ್ದಾರೆ ಎಂದರು.
ದ.ಕ. ವಿಖಾಯ ಉಸ್ತುವಾರಿ ಇಸಾಖ್ ಹಾಜಿ ತೋಡಾರ್, ಕೆ.ವಿ.ಜಿ ಮೆಡಿಕಲ್ ಕಾಲೇಜ್ ವೈದ್ಯ ಡಾ. ಹರ್ಷವರ್ಧನ್, ಅರಂತೋಡು ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಅರಂತೋಡು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ, ಪಠೇಲ್ ಮೆಡಿಕಲ್ ಮಾಲೀಕರಾದ ಬದ್ರುದ್ದೀನ್ ಪಠೇಲ್, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಉನೈಸ್ ಪೆರಾಜೆ, ದ.ಕ.ವಿಖಾಯ ರಕ್ತದಾನಿ ಉಸ್ತುವಾರಿ ತಾಜುದ್ದೀನ್ ಟರ್ಲಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.