ಕರ್ನಾಟಕ ಪ್ರದೇಶ ಕುರುಬರ ಸಂಘದ ಪ. ಪಂಗಡದ ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷರಾಗಿ ಕೆ.ಬಿ. ಶಾಂತಪ್ಪ ಆಯ್ಕೆ

23/09/2020

ಮಡಿಕೇರಿ ಸೆ. 23 : ಕರ್ನಾಟಕ ಪ್ರದೇಶ ಕುರುಬರ ಸಂಘದ ಪರಿಶಿಷ್ಟ ಪಂಗಡದ ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷರಾಗಿ ಕೆ.ಬಿ. ಶಾಂತಪ್ಪ ಅವರನ್ನು ನೇಮಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಡಿ. ವೆಂಕಟೇಶ್ ಮೂರ್ತಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಂಘದ ಜವಾಬ್ದಾರಿಯನ್ನು ವಹಿಸಿಕೊಂಡು ಜಿಲ್ಲಾ ಮತ್ತು ತಾಲ್ಲೂಕುಗಳಲ್ಲಿ ಕುರುಬ ಸಮಾಜವನ್ನು ಎಸ್‍ಟಿ ಮೀಸಲಾತಿಗೆ ಒಳಪಡುವಂತೆ ಹೋರಾಟವನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ.