ಕೆಪಿಸಿಸಿ ವಕ್ತಾರರಾಗಿ ಎ.ಎಸ್.ಪೊನ್ನಣ್ಣ ನೇಮಕ

23/09/2020

ಮಡಿಕೇರಿ ಸೆ.23 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮತ್ತೊಂದು ಜವಬ್ದಾರಿಯನ್ನು ನೀಡಿದ್ದಾರೆ. ಎ.ಎಸ್.ಪೊನ್ನಣ್ಣ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.