ಕುಶಾಲನಗರದಲ್ಲಿ ಪೋಷಣ ಅಭಿಯಾನ ಮತ್ತು ಸೀಮಂತ ಕಾರ್ಯಕ್ರಮ

September 23, 2020

ಮಡಿಕೇರಿ ಸೆ.23 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕುಶಾಲನಗರ ಪಟ್ಟಣ ಪಂಚಾಯ್ತಿ, ರೋಟರಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಪೆÇೀಷಣ ಅಭಿಯಾನ ಮತ್ತು ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕುಶಾಲನಗರ ರೋಟರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ರೋಟರಿ ಅಧ್ಯಕ್ಷ ಕೆ.ಪಿ.ಚಂದ್ರಶೇಖರ್ ಚಾಲನೆ ನೀಡಿ ಮಾತನಾಡಿ, ಆಧುನಿಕ ಜೀವನಶೈಲಿಯಿಂದ ಜನಸಾಮಾನ್ಯರಲ್ಲಿ ಆರೋಗ್ಯ ಏರುಪೇರಾಗುತ್ತಿದೆ. ಪ್ರಸಕ್ತ ದಿನಗಳಲ್ಲಿ ದಿನನಿತ್ಯ ವಸ್ತುಗಳು ಕೂಡ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟುಮಾಡುವ ಸಾಧ್ಯತೆಯಿದೆ. ಪ್ರತಿಯೊಬ್ಬರೂ ಕೂಡ ಆರೋಗ್ಯ ವೃದ್ದಿಸುವ ಸಾವಯವ ಆಹಾರ ಪದಾರ್ಥಗಳ ಬಳಕೆಗೆ ಮುಂದಾಗಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಗರ್ಭಿಣಿ ಮಹಿಳೆಯರಿಗೆ ಸೀಮಂತ ನೆರವೇರಿಸಲಾಯಿತು. ಇದೇ ಸಂದರ್ಭ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗಿಯಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಶಾಲನಗರ ಪಪಂ ಸದಸ್ಯ ವಿ.ಎಸ್.ಆನಂದಕುಮಾರ್, ರೋಟರಿ ಕಾರ್ಯದರ್ಶಿ ಉಲ್ಲಾಸ್ ಕೃಷ್ಣ, ಆರೋಗ್ಯ ಇಲಾಖೆಯ ಜಿಲ್ಲಾ ಶುಶ್ರೂಷಣ ಅಧಿಕಾರಿ ಸುಶೀಲಾ, ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕರಾದ ಗೌರವ್ವ, ಸಾವಿತ್ರಿ, ಆರೋಗ್ಯ ಸಹಾಯಕರಾದ ವಿಜಯೇಂದ್ರ, ಮುಖೇಶ್ ವಾಲಿಕರ್, ಡಿ.ಎಂ.ಸುಶೀಲಾ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಾದ ಸುಚಿತ್ರ, ಚಂದ್ರಿಕಾ, ಸರಸ್ವತಿ ಮತ್ತಿತರರು ಇದ್ದರು.

error: Content is protected !!