ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

September 24, 2020

ನವದೆಹಲಿ ಸೆ.24 : ಪ್ರತಿಪಕ್ಷಗಳು ಕಲಾಪ ಬಹಿಷ್ಕರಿಸಿದ್ದನ್ನೇ ಬಂಡವಾಳ ಮಾಡಿಕೊಂಡ ಕೇಂದ್ರ ಸರ್ಕಾರ ತರಾತುರಿಯಲ್ಲಿ ಹಲವು ಮಸೂದೆಗಳನ್ನು ಅಂಗೀಕರಿಸಿದ ನಂತರ ಬುಧವಾರ ರಾಜ್ಯಸಭಾ ಕಲಾಪವನ್ನು ಎಂಟು ದಿನಗಳ ಮುನ್ನವೇ ಅನಿರ್ದಿಷ್ಟಾವಧಿಗೆ ಮುಂದೂಡಿದೆ.
ಇಂದು ರಾಜ್ಯಸಭೆಯಲ್ಲಿ ಮೂರು ಕಾರ್ಮಿಕ ಮಸೂದೆ ಹಾಗೂ ವಿದೇಶಿ ದೇಣಿಗೆ(ನಿಯಂತ್ರಣ) ತಿದ್ದುಪಡಿ ಮಸೂದೆ, 2020 ಅನ್ನು ಅಂಗೀಕರಿಸಿದ ನಂತರ ರಾಜ್ಯಸಭಾ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಅವರು ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.
ನಿನ್ನೆ ಪ್ರತಿಪಕ್ಷಗಳ ಅನುಪಸ್ಥಿತಿಯ ಮಧ್ಯೆ ರಾಜ್ಯಸಭೆಯಲ್ಲಿ ಕೇವಲ ಮೂರು ಗಂಟೆಯಲ್ಲಿ ದಾಖಲೆಯ 9 ಮಸೂದೆಗಳನ್ನು ಅಂಗೀಕರಿಸಲಾಗಿತ್ತು. ಇದು ಐದು ಮಸೂದೆಗಳನ್ನು ಅಂಗೀಕರಿಸುವದರೊಂದಿಗೆ ಮುಂಗಾರು ಅಧಿವೇಶನಕ್ಕೆ ತೆರೆ ಬಿದ್ದಿದೆ.

error: Content is protected !!