ಪ್ರತಿಪಕ್ಷಗಳ ಸಂಸದರ ಪ್ರತಿಭಟನೆ

September 24, 2020

ನವದೆಹಲಿ ಸೆ.24 : ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳನ್ನು ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಂಸದರು ಬುಧವಾರ ಸಂಸತ್ ಭವನ ಆವರಣದಲ್ಲಿ ಗಾಂಧಿ ಪ್ರತಿಮೆಯಿಂದ ಅಂಬೇಡ್ಕರ್ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ರೈತರ ಕುರಿತ ಮಸೂದೆಗಳಲ್ಲಿ ತಿದ್ದುಪಡಿಗಳನ್ನು ಮತ್ತು ರಾಜ್ಯಸಭೆಯಲ್ಲಿ ಎಂಟು ಸದಸ್ಯರ ಅಮಾನತು ವಿರೋಧಿಸಿ ಪ್ರತಿಪಕ್ಷದ ಸದಸ್ಯರು ಇಂದು ರೈತರನ್ನು, ಕಾರ್ಮಿಕರನ್ನು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ ಎಂಬ ಫಲಕ ಹಿಡಿದು ಮೌನ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಿಪಿಐ, ಸಿಪಿಐ-ಎಂ, ಡಿಎಂಕೆ, ರಾಷ್ಟ್ರೀಯ ಜನತಾದಳ (ಆರ್ಜೆಡಿ), ಆಮ್ ಆದ್ಮಿ ಪಕ್ಷ (ಎಎಪಿ), ಸಮಾಜವಾದಿ ಪಕ್ಷ ಮತ್ತು ಎನ್ಸಿಪಿ ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

error: Content is protected !!