ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

September 24, 2020

ಮಡಿಕೇರಿ ಸೆ.24 : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ತರಬೇತಿ ಸಂಸ್ಥೆಯು 6 ತಿಂಗಳ ಅವಧಿಯ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್” ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ರೂ.400 ಶಿಷ್ಯವೇತನ ಮತ್ತು ಉಚಿತ ವಸತಿ ಗೃಹದ ವ್ಯವಸ್ಥೆ ಇರುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್, 5 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಅಬ್ಭಿಪಾಲ್ಸ್ ರಸ್ತೆ, ಮುತ್ತಪ್ಪ ದೇವಸ್ಥಾನ ಹತ್ತಿರ, ಮಡಿಕೇರಿ, ದೂರವಾಣಿ ಸಂಖ್ಯೆ: 08272-228437/ 9845318364/ 9535250704/ 9449245024/ 8762110952/ 9482890569/ 8762925862 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲರು ತಿಳಿಸಿದ್ದಾರೆ.