ತುಳು ಭಾಷಾ ಸ್ಪರ್ಧಾ ವಿಜೇತರಿಗೆ ಸೆ.27 ರಂದು ಬಹುಮಾನ ವಿತರಣೆ

ಮಡಿಕೇರಿ ಸೆ.24 : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಸಹಯೋಗದೊಂದಿಗೆ ನಡೆದ ‘ತುಳುಗಾದೆ ಸ್ಪರ್ಧೆ’, ‘ಒಗಟು ಸ್ಪರ್ಧೆ’ ಮತ್ತು ತುಳು ಕವಿತೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸೆ.27 ರಂದು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಪಿ.ಎಂ.ರವಿ ತಿಳಿಸಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ್ ಜಿ.ಕತ್ತಲ್‍ಸರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ತುಳುವೆರ ಜನಪದ ಕೂಟದ ಜಿಲ್ಲಾಧ್ಯಕ್ಷ ಶೇಖರ್ ಭಂಡಾರಿ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ತುಳುವೆರ ಜನಪದ ಕೂಟ, ವಿವಿಧ ಸಮಾಜದ ಪ್ರಮುಖರು ಹಾಗೂ ಅಕಾಡೆಮಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಇದೇ ಸಂದರ್ಭ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿರುವ ಪಿ.ಎಂ.ರವಿ, ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲಾ ಸ್ಪರ್ಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
