ಹಿರಿಯ ವಿದ್ವಾಂಸ ಖಾಝಿ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ನಿಧನಕ್ಕೆ ಟಿ.ಎಂ.ಶಾಹೀದ್ ತೆಕ್ಕಿಲ್ ಸಂತಾಪ

24/09/2020

ಮಡಿಕೇರಿ ಸೆ. 24 : ಹಿರಿಯ ವಿದ್ವಾಂಸ ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಖಾಝಿ ಅಲ್ಹಾಜ್ ಪಿ.ಎಂ. ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಅವರ ನಿಧನಕ್ಕೆ ಕೆಪಿಸಿಸಿಯ ಮಾಜಿ ಕಾರ್ಯದರ್ಶಿ ಹಾಗೂ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಾಹೀದ್ ತೆಕ್ಕಿಲ್ ಸಂತಾಪ ಸೂಚಿಸಿದ್ದಾರೆ.
ಕರ್ಮ ಶಾಸ್ತ್ರ, ಖಗೋಳ ಶಾಸ್ತ್ರದ ಬಗ್ಗೆ ಉನ್ನತ ಜ್ಞಾನ ಹೊಂದಿರುವ ಅವರು ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿ, ಜಾಮಿಯಾ ಸಅದಿಯ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರಾಗಿ, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರದ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಇವರ ನಿಧನದಿಂದ ಉಲಮಾ ವರ್ಗಕ್ಕೆ ಮತ್ತು ಮುಸ್ಲಿಂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇವರ ಅಗಲುವಿಕೆಯಿಂದ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಅಲ್ಲಾಹು ಕರುಣಿಸಲಿ ಮತ್ತು ಮಗ್ಫಿರತ್‍ನ್ನು ಅನುಗ್ರಹಿಸಲಿ ಎಂದು ಟಿ.ಎಂ.ಶಾಹೀದ್ ತಿಳಿಸಿದ್ದಾರೆ.