ಸೆ.29 ರಂದು ಅಪ್ಪಚ್ಚಕವಿ 152 ನೇ ಜನ್ಮ ಶತಮಾನೋತ್ಸವ

24/09/2020

ಮಡಿಕೇರಿ ಸೆ.24 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಕೊಡಗಿನ ಹೆಸರಾಂತ ಸಾಹಿತಿ, ನಾಟಕಗಾರ, ಕವಿ, ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿಯ ನೆನಪಿನಲ್ಲಿ “ಅಪ್ಪಚ್ಚಕವಿಯವರ 152ನೇ ಜನ್ಮ ಶತಮಾನೋತ್ಸವ ಮತ್ತು ಪೊಂಗುರಿ & ಪುಸ್ತಕ ಬಿಡುಗಡೆ” ಎಂಬ ವಿಶೇಷ ಕಾರ್ಯಕ್ರಮವು ಸೆಪ್ಟೆಂಬರ್, 29 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಓಂಕಾರೇಶ್ವರ ದೇವಸ್ಥಾನದ ಹತ್ತಿರ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯನವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಕೊಂಗಂಡ ಎಸ್. ದೇವಯ್ಯ, ಹಿರಿಯ ಸಾಹಿತಿಗಳಾದ ಮೊಣ್ಣಂಡ ಶೋಭಾ ಸುಬ್ಬಯ್ಯ ಹಾಗೂ ಕೊಡಗು ಪ್ರೆಸ್ಸ್ ಕ್ಲಬ್ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪನವರು ಭಾಗವಹಿಸಲಿದ್ದಾರೆ.
ನಂತರ ನಡೆಯುವ ಕಾರ್ಯಕ್ರಮದಲ್ಲಿ ಡಾ. ಕಳ್ಳಿಚಂಡ ರಶ್ಮಿ ನಂಜಪ್ಪ ಇವರು ಬರೆದ “ಪೊಮ್ಮೊದಿರ ಪೊನ್ನಪ್ಪ” (ನಾಟಕ) ಪುಸ್ತಕ ಮತ್ತು ಶ್ರೀ ಕೊಟ್ಟುಕತ್ತಿರ ಜಾಲಿ ಸೋಮಣ್ಣ ಇವರು ಬರೆದ “ಡೌರಿ ಡೈವೋರ್ಸ್” ಪುಸ್ತಕವು ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪ್ರಕಟಿಸಿದ ತ್ರೈಮಾಸಿಕ “ಪೊಂಗುರಿ” ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಪ್ರಕಟಿತ ಪುಸ್ತಕ & ಸಿ.ಡಿ.ಗಳ ಪ್ರದರ್ಶನ ಮತ್ತು ಮಾರಾಟ ಇರುತ್ತದೆ. ಸರ್ಕಾರದ ಮಾರ್ಗಸೂಚಿಯಂತೆ ಈ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ.