2,57,765 ಮನೆಗಳ ನಿರ್ಮಾಣ ಕಾರ್ಯ ಪೂರ್ಣ : ವಸತಿ ಸಚಿವ ವಿ.ಸೋಮಣ್ಣ

ಮಡಿಕೇರಿ ಸೆ.24 : ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ವತಿಯಿಂದ ಕಳೆದ 3 ವರ್ಷಗಳಿಂದ ಅಂದರೆ 2017-18 ರಿಂದ 2019-20ನೇ ಸಾಲಿನವರೆಗೆ ವಿವಿಧ ವಸತಿ ಯೋಜನೆಯಡಿ ಒಟ್ಟು 6,49,585 ಮನೆಗಳನ್ನು ಮಂಜೂರು ಮಾಡಲಾಗಿದೆ. ಈ ಪೈಕಿ 2,57,765 ಮನೆಗಳು ಪೂರ್ಣಗೊಂಡಿದ್ದು, 2,41,387 ಮನೆಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿದೆ. 38,303 ಮನೆಗಳು ಇನ್ನೂ ಪ್ರಾರಂಭವಾಗಬೇಕಿದೆ ಎಂದು ವಸತಿ ಹಾಗೂ ಕೊಡಗು ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ನಿಗದಿತ ಸಮಯದಲ್ಲಿ ಮನೆ ನಿರ್ಮಾಣ ಪ್ರಾರಂಭಿಸದೆ ಇರುವುದರಿಂದ 1,12,130 ಮನೆಗಳನ್ನು ರದ್ದುಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಸಭೆ ಅಧಿವೇಶನದಲ್ಲಿ ಭಾಗವಹಿಸಿ ಜಿಲ್ಲೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು.
ಕಳೆದ 3 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಯೋಜನೆಯಡಿಯಲ್ಲಿ ಎಷ್ಟು ಮನೆಗಳು ಮಂಜೂರಾಗಿವೆ. ಈ ಪೈಕಿ ಎಷ್ಟು ಮನೆಗಳು ಪೂರ್ಣಗೊಂಡಿವೆ ಹಾಗೂ ಪೂರ್ಣಗೊಳ್ಳಲು ಬಾಕಿ ಇರುವ ಮನೆಗಳ ಸಂಖ್ಯೆ ಎಷ್ಟು, ಪೂರ್ಣಗೊಳ್ಳದಿರಲು ಕಾರಣವೇನು ಎಂಬ ಬಗ್ಗೆ ವಿಧಾನಸಭಾ ಕ್ಷೇತ್ರವಾರು ಮಾಹಿತಿ ಕೇಳಿದರು.
