ಅ.1 ರಂದು ಸಚಿವ ಸೋಮಣ್ಣ ಭೇಟಿ
26/09/2020

ಮಡಿಕೇರಿ ಸೆ.26 : ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಅ.1 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಡಿಕೇರಿ ಹಾಗೂ ಗೋಣಿಕೊಪ್ಪದ ದಸರಾ ಆಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ತಲಕಾವೇರಿಯಲ್ಲಿ ನಡೆಯುವ ತೀರ್ಥೋದ್ಭವ ಕುರಿತಂತೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಕೊಳಕೇರಿ ಗ್ರಾಮದ ಮೋಟೇರಿ ಶ್ರೀ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ಅವರು ತಿಳಿಸಿದ್ದಾರೆ.
