ಮರೆಯಾದ ಕೋಗಿಲೆಗೆ ಶ್ರದ್ಧಾಂಜಲಿ ಅರ್ಪಿಸಿದ ಕೊಡಗು ಕಸಾಪ

26/09/2020

ಮಡಿಕೇರಿ ಸೆ.26 : ಗಾನ ಗಾರುಡಿಗ, ಕನ್ನಡದ ಕೋಗಿಲೆ ಎಂದೇ ಖ್ಯಾತರಾಗಿದ್ದ, ಕಲಾವದರೂ ಸಂಗೀತ ನಿರ್ದೇಶಕರೂ ಆಗಿದ್ದ ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.ಕಸಾಪ ಜಿಲ್ಲಾ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಎಸ್ ಪಿ ಬಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೌನಾಚರಣೆ ಮೂಲಕ ಸಂತಾಪ ಸೂಚಿಸಲಾಯಿತು. ಈ ಸಂದರ್ಭ ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ಜಿಲ್ಲಾ ಗೌರವ ಕಾರ್ಯದರ್ಶಿ ಕೆ.ಎಸ್.ರಮೇಶ್, ನಿರ್ದೇಶಕರುಗಳಾದ ಧನಂಜಯ್, ತಳೂರು ಉಷಾರಾಣಿ, ಪರ್ಲಕೋಟಿ ಸೋನಾ ಪ್ರೀತು, ಕಚೇರಿ ಸಿಬ್ಬಂದಿ ಶ್ವೆತಾ, ವಿದ್ಯಾರ್ಥಿಗಳು, ಶಿಕ್ಷಕರು ಹಾಜರಿದ್ದರು.