ರೈತರ ಹೋರಾಟಕ್ಕೆ ಕೊಡಗು ಜೆಡಿಎಸ್ ಬೆಂಬಲ

26/09/2020

ಮಡಿಕೇರಿ ಸೆ.26 : ರೈತ ಪರ ಸಂಘಟನೆಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸೆ.28 ರಂದು ನಡೆಸುತ್ತಿರುವ ಪ್ರತಿಭಟನೆಗೆ ಜಿಲ್ಲಾ ಜಾತ್ಯತೀತ ಜನತಾದಳ ಸಂಪೂರ್ಣ ಬೆಂಬಲ ಸೂಚಿಸಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಮಸೂದೆಗಳು ರೈತ ವಿರೋಧಿಯಾಗಿದೆ ಎಂದು ಆರೋಪಿಸಿದ್ದಾರೆ. ಕೃಷಿಕ ವರ್ಗ ಹಾಗೂ ಕಾರ್ಮಿಕರು ನಡೆಸುವ ಎಲ್ಲಾ ಹೋರಾಟಗಳಿಗೆ ಜೆಡಿಎಸ್ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.