ಸೆ.28 ರಂದು ವಿರಾಜಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ

27/09/2020

ಮಡಿಕೇರಿ ಸೆ.27 : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬಂಬಲ ಸೂಚಿಸಿ ಸೆ.28 ರಂದು ವಿರಾಜಪೇಟೆ ತಾಲ್ಲೂಕು ಜಾತ್ಯತೀತ ಜನತಾದಳ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ ಎಂದು ಪಕ್ಷದ ತಾಲ್ಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್ ತಿಳಿಸಿದ್ದಾರೆ.
ಪಟ್ಟಣದ ಗಡಿಯಾರ ಕಂಬದ ಬಳಿ ಬೆಳಗ್ಗೆ 10.30 ಗಂಟೆಗೆ ರೈತ ಸಂಘ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು, ಬಿಜೆಪಿಯೇತರ ರಾಜಕೀಯ ಪಕ್ಷಗಳೊಂದಿಗೆ ಸೇರಿ ಜೆಡಿಎಸ್ ಪ್ರತಿಭಟನೆಯನ್ನು ನಡೆಸಲಿದ್ದು, ಕೊಡಗು ಬಂದ್ ಗೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ. ರೈತ ಹಾಗೂ ಕಾರ್ಮಿಕ ವಿರೋಧಿ ಮಸೂದೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಹಿಂಪಡೆಯುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.