ಆತ್ಮನಿರ್ಭರದಲ್ಲಿ ರೈತರ ಪಾತ್ರ ಪ್ರಮುಖ

ನವದೆಹಲಿ ಸೆ.28 : ಆತ್ಮನಿರ್ಭರ ಭಾರತದ ನಿರ್ಮಾಣದಲ್ಲಿ ರೈತರ ಪಾತ್ರ ಪ್ರಮುಖವಾಗಿದ್ದು, ತಮ್ಮ ಉತ್ಪನ್ನಗಳನ್ನು ಮಂಡಿಗಳ ಹೊರಗೆ ಮಾರಾಟ ಮಾಡುವ ಸ್ವಾತಂತ್ರ್ಯ ಸರ್ಕಾರ ನೀಡಿದೆ ಎಂದು ಹೇಳುವ ಮೂಲಕ ಕೃಷಿ ಮಸೂದೆಯನ್ನು ಪ್ರಧಾನಿ ಮೋದಿ ತಮ್ಮ ಮನ್ ಕಿಬಾತ್ ಕಾರ್ಯಕ್ರಮದಲ್ಲಿ ಸಮರ್ಥಿಸಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 69ನೇ ಮಾಸಿಕ ಮನ್‍ಕಿ ಬಾತ್‍ರೇಡಿಯೊ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇಂದಿನ ಕಾರ್ಯಕ್ರಮದಲ್ಲಿ ರೈತರ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಕೃಷಿ ಮಸೂದೆಯ ಲಾಭಗಳನ್ನು ಉಲ್ಲೇಖಿಸಿದರು. ನೂತನ ಮಸೂದೆ ದೇಶದ ಕೃಷಿ ವಲಯದ ಚಹರೆ ಬದಲಿಸಲಿದೆ. ಕೃಷಿ ವಿಧೇಯಕಗಳು ರೈತರ ಪರವಾಗಿದ್ದು, ಇವುಗಳ ಲಾಭವನ್ನು ದೇಶದ ರೈತ ಸಮುದಾಯ ಅರಿಯಬೇಕಿದೆ. ತಮ್ಮ ಉತ್ಪನ್ನಗಳನ್ನು ಮಂಡಿಗಳ ಹೊರಗೆ ಮಾರಾಟ ಮಾಡುವ ಸ್ವಾತಂತ್ರ್ಯದ ಬಗ್ಗೆ ಮೋದಿ ರೈತರಿಗೆ ಸಂದೇಶ ನೀಡಿದರು. ‘ಆತ್ಮನಿರ್ಭರ ಭಾರತ ನಿರ್ಮಾಣದ ಪ್ರಯತ್ನಗಳಲ್ಲಿ ರೈತರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ರೈತರು ತಮ್ಮ ಉತ್ಪನ್ನಗಳನ್ನು ತಮಗೆ ಇಷ್ಟಬಂದ ಜಾಗದಲ್ಲಿ, ಇಷ್ಟಬಂದ ಬೆಲೆಗೆ ಮಾರಾಟ ಮಾಡುವ ಸ್ವಾತಂತ್ರ್ಯ ಮತ್ತು ಶಕ್ತಿಯನ್ನು ಪಡೆದಿದ್ದಾರೆ ಎಂದು ಮೋದಿ ಹೇಳಿದ್ದಾರೆ.
