ಬೆಂಗಳೂರಿನಲ್ಲಿ ಎನ್‍ಐಎ ಶಾಶ್ವತ ಕಚೇರಿ

28/09/2020

ನವದೆಹಲಿ ಸೆ.28 : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಶಾಶ್ವತ ಕಚೇರಿ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರ ಒಪ್ಪಿದೆ ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ನೂತನ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಭಾನುವಾರ ಹೇಳಿದ್ದಾರೆ,
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತೇಜಸ್ವಿ ಸೂರ್ಯ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ ಡಿಜೆ ಹಳ್ಳಿ ಗಲಭೆ ಕುರಿತಂತೆ ಚರ್ಚೆ ನಡೆಸಿ ನಗರದಲ್ಲಿ ಎನ್‍ಐಎ ಶಾಶ್ವತ ಕಚೇರಿ ಸ್ಥಾಪನೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿತ್ತು.
ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ತೇಜಸ್ವಿ ಸೂರ್ಯ ಅವರು, ಅಮಿತ್ ಶಾ ಭೇಟಿ ವೇಳೆ ಬೆಂಗಳೂರಿನ ಡಿಜೆಹಳ್ಳಿ ಹಾಗೂ ಕೆಜೆಹಳ್ಳಿಗಳಲ್ಲಿ ಇತ್ತೀಚೆಗೆ ಗಲಭೆ ನಡೆದಿರುವ ಹಾಗೂ ಈ ಹಿಂದೆ ರಾಜ್ಯದಲ್ಲಿ ಅನೇಕ ಉಗ್ರ ಸಂಘಟನೆಗಳ ದಾಳಿಯ ಹಿನ್ನಲೆಯಲ್ಲಿ ಸೂಕ್ತ ತನಿಖೆಗಾಗಿ ಎನ್‍ಐಎ ಕಚೇರಿ ಆರಂಭಿಸುವಂತೆ ಮನವಿ ಸಲ್ಲಿಸಲಾಯಿತು. ಈ ವೇಳೆ ಅಮಿತ್ ಶಾ ಅವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ.
ಅನೇಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಉಗ್ರರನ್ನು, ಉಗ್ರ ಸಂಘಟನೆಗಳನ್ನು ಮಟ್ಟ ಹಾಕಲು ನಗರದಲ್ಲಿ ಎನ್‍ಐಎ ಶಾಶ್ವತ ಕಚೇರಿಯ ಅಗತ್ಯ ಇದೆ ಎಂಬುದನ್ನು ಸಚಿವರಿಗೆಮನವರಿಕೆಮಾಡಲಾಗಿದೆ ಎಂದು ಅವರು ತಿಳಿಸಿದರು.