ವೇಶ್ಯಾವಾಟಿಕೆ ಕ್ರಿಮಿನಲ್ ಅಪರಾಧವಲ್ಲ

September 28, 2020

ಮುಂಬೈ ಸೆ.28 : ವಯಸ್ಕ ಮಹಿಳೆಗೆ ತನ್ನ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದ್ದು. ಕಾನೂನಿನಡಿಯಲ್ಲಿ ವೇಶ್ಯಾವಾಟಿಕೆ ಕ್ರಿಮಿನಲ್ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಮುಂಬೈನಲ್ಲಿ ಬಂಧನಕ್ಕೊಳಗಾಗಿರುವ ಮೂವರು ಮಹಿಳಾ ಲೈಂಗಿಕ ಕಾರ್ಯಕರ್ತೆಯರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬಾಂಬೇ ಹೈಕೋರ್ಟ್ ನ ನ್ಯಾಯಮೂರ್ತಿ ಪೃಥ್ವಿರಾಜ್ ಚೌಹಾಣ್‍ಅವರ ನೇತೃತ್ವದ ನ್ಯಾಯಪೀಠ, ‘ಕಾನೂನಿನಡಿಯಲ್ಲಿ ವೇಶ್ಯಾವಾಟಿಕೆ ಕ್ರಿಮಿನಲ್ ಅಪರಾಧವಲ್ಲ ಮತ್ತು ವಯಸ್ಕ ಮಹಿಳೆಗೆ ತನ್ನ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ. 1956ರ ಅನೈತಿಕ ಚಟುವಟಿಕೆ (ತಡೆಗಟ್ಟುವಿಕೆ) ಕಾಯ್ದೆಯ ಅಡಿಯಲ್ಲಿ ವೇಶ್ಯಾವಾಟಿಕೆಯನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.