ಉದ್ಯೋಗಿನಿ ಯೋಜನೆ : ಅರ್ಜಿ ಆಹ್ವಾನ

September 28, 2020

ಮಡಿಕೇರಿ ಸೆ.28 : ಪ್ರಸಕ್ತ(2020-21) ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಕೊಡಗು ಜಿಲ್ಲೆಗೆ ಪ.ಜಾ-1. ಪ.ಪಂ-6, ಅ.ಸಂ-2, ವಿಕಲಚೇತನರು-1, ವಿಧವೆಯರು-1, ಸಂಕಷ್ಟಕೊಳಗಾದವರು-1, ಇತರೆ-7, ಒಟ್ಟು 19 ಭೌತಿಕ ಗುರಿಗಳನ್ನು ಅನುಷ್ಟಾನಗೊಳಿಸಲು 1:3 ಅನುಪಾತದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ, ಹಾಗೂ ಕೃಷಿಯೇತರ ಚಟುವಟಿಕೆಗಳ (ಹಂದಿ ಸಾಕಾಣಿಕೆ, ಆಡು ಸಾಕಾಣಿಕೆ, ಕೋಳಿ ಸಾಕಾಣಿಕೆ, ನರ್ಸರಿ, ಬ್ಯೂಟಿಪಾರ್ಲರ್, ಟೈಲರಿಂಗ್, ವ್ಯಾಪಾರ, ಇತ್ಯಾದಿಗಳಿಗೆ) ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು 18 ರಿಂದ 55 ವರ್ಷ ವಯೋಮಿತಿಗೊಳಪಟ್ಟು ಬಡತನ ರೇಖೆಯ ಒಳಪಡುವ ಪಡಿತರ ಚೀಟಿ ಹೊಂದಿದ ಮಹಿಳೆಯರಿಗೆ ಅವಕಾಶವಿರುತ್ತದೆ.
ಜಿಲ್ಲಾ ವ್ಯವಸ್ಥಾಪಕರ ಕಚೇರಿ/ಉಪನಿರ್ದೇಶಕರ ಕಚೇರಿ, ಹಾಗೂ ಜಿಲ್ಲೆಯ 3 ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ಉದ್ಯೋಗಿನಿ ಯೋಜನೆಯ ಅರ್ಜಿಗಳು ಲಭ್ಯವಿದ್ದು ಅರ್ಹ ಮಹಿಳೆಯರು ಸದರಿ ಕಚೇರಿಗಳಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಸೆಪ್ಟೆಂಬರ್, 30 ರೊಳಗೆ ಸಲ್ಲಿಸಬಹುದಾಗಿದೆ. ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಆಸಕ್ತಿ ಇರುವ ಮಹಿಳೆಯರು ಈ ಕೆಳಕಂಡ ಕಚೇರಿ/ದೂರವಾಣಿ ಸಂಖ್ಯೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹದು.
18 ರಿಂದ 55 ವರ್ಷದೊಳಗಿನ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ/ಪಂಗಡದ ಮಹಿಳೆಯರಿಗೆ ಘಟಕ ವೆಚ್ಚ ರೂ.1 ಲಕ್ಷ ದಿಂದ ರೂ.3 ಲಕ್ಷ ಹಾಗೂ ಶೇ.50 ಸಹಾಯಧನ ನೀಡಲಾಗುವುದು ಮತ್ತು ಕುಟುಂಬದ ವಾರ್ಷಿಕ ಆದಾಯ ರೂ.2 ಲಕ್ಷಕ್ಕೆ ಮೀರಬಾರದು. ವಿಧವೆಯರು, ವಿಕಲಚೇತನರು, ಸಂಕಷ್ಟ ಮಹಿಳೆ, ಅಲ್ಪಸಂಖ್ಯಾತರು ಮತ್ತು ಇತರೆ ವರ್ಗದವರಿಗೆ ಘಟಕ ವೆಚ್ಚ ರೂ.1 ಲಕ್ಷದಿಂದ ರೂ.3 ಲಕ್ಷ ಹಾಗೂ ಶೇ.30 ಸಹಾಯಧನ ನೀಡಲಾಗುವುದು. ಮತ್ತು ಕುಟುಂಬದ ವಾರ್ಷಿಕ ಆದಾಯ ರೂ.1,50,000ಕ್ಕೆ ಮೀರಬಾರದು. ಜಾತಿ ಪ್ರಮಾಣ ಪತ್ರ, ಆದಾಯ ದೃಡೀಕರಣ ಪತ್ರ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಬಿ.ಪಿ.ಎಲ್ ಕಾರ್ಡ್. ಪಾಸ್ ಪೋರ್ಟ್ ಸೈಜ್ ಪೋಟೋ ಸಲ್ಲಿಸಬೇಕು.
ಜಿಲ್ಲಾ ವ್ಯವಸ್ಥಾಪಕರ ಕಚೇರಿ/ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್, ಮೈಸೂರು ರಸ್ತೆ, ಮಡಿಕೇರಿ, ದೂರವಾಣಿ ಸಂಖ್ಯೆ 7996368687. ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್, ಮೈಸೂರು ರಸ್ತೆ, ಮಡಿಕೇರಿ. ದೂರವಾಣಿ ಸಂಖ್ಯೆ-08272-228197. ಸೋಮವಾರಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಸ್ತ್ರೀಶಕ್ತ್ತಿ ಭವನ, ತಾಲೂಕು ಪಂಚಾಯತ್ ಆವರಣ, ಸೋಮವಾರಪೇಟೆ, ದೂ.ಸಂ.08276-282281. ವಿರಾಜಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಜಿಲ್ಲಾ ಸ್ತ್ರೀಶಕ್ತಿ ಮಾರುಕಟ್ಟೆ ಸಂಕೀರ್ಣ ಕಟ್ಟಡ, ಉಪ ನೋಂದಾವಣಾಧಿಕಾರಿಗಳ ಕಚೇರಿ ಎದುರು ಪೊನ್ನಂಪೇಟೆ ದೂರವಾಣಿ ಸಂಖ್ಯೆ 08274-249010 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.