ರಣದೀಪ್ ಸುರ್ಜಿವಾಲರನ್ನು ಭೇಟಿಯಾದ ಶಾಹಿದ್ ತೆಕ್ಕಿಲ್

September 28, 2020

ಮಡಿಕೇರಿ ಸೆ.28 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಶಾಹಿದ್ ತೆಕ್ಕಿಲ್ ಅವರು ಕರ್ನಾಟಕ ರಾಜ್ಯದ ಎಐಸಿಸಿ ಉಸ್ತುವಾರಿ ರಣದೀಪ್ ಸುರ್ಜಿವಾಲ ಅವರನ್ನು ಭೇಟಿಯಾದರು. ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆ ಕುರಿತು ಚರ್ಚಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಎಂ.ನಾರಾಯಣಸ್ವಾಮಿ ಮತ್ತಿತರರು ಈ ಸಂದರ್ಭ ಹಾಜರಿದ್ದರು.