ರೋಹಿಣಿ ಸಿಂಧೂರಿ ಮೈಸೂರು ಡಿಸಿ

29/09/2020

ಬೆಂಗಳೂರು ಸೆ.29 : ಇತ್ತೀಚಿಗಷ್ಟೇ ಮೈಸೂರು ಜಿಲ್ಲಾಧಿಕಾರಿಯಾಗಿ ಬಂದಿದ್ದ ಬಿ ಶರತ್ ಅವರನ್ನು ರಾಜ್ಯ ಸರ್ಕಾರ ಸೋಮವಾರ ದಿಢೀರ್ ಎತ್ತಂಗಡಿ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿದೆ.
ರಾಜ್ಯ ಸರ್ಕಾರ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಇಂದು ವರ್ಗಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಆಗಸ್ಟ್ 29 ರಂದು ಕಲಬುರಗಿಯಿಂದ ಮೈಸೂರು ಜಿಲ್ಲಾಧಿಕಾರಿಯಾಗಿ ಬಿ ಶರತ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈಗ ಒಂದು ತಿಂಗಳು ತುಂಬುವ ಮೊದಲೇ ಶರತ್ ಅವರನ್ನು ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಲಾಗಿದೆ.