ಸೋಮವಾರಪೇಟೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ

September 29, 2020

ಸೋಮವಾರಪೇಟೆ ಸೆ. 29 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿ ಆವರಣದಲ್ಲಿ ನಡೆಯಿತು.
ತಾಲೂಕಿನಲ್ಲಿ 284 ಅಂಗನವಾಡಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದು, ಶಾಸಕರು 20 ಮಂದಿಗೆ ಸ್ಮಾರ್ಟ್ ಫೋನ್ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್, ಉಪಾಧ್ಯಕ್ಷ ಅಭಿಮನ್ಯುಕುಮಾರ್, ಪ.ಪಂ. ಸದಸ್ಯ ಬಿ.ಆರ್. ಮಹೇಶ್, ಬಿಜೆಪಿ ತಾಲೂಕು ಅಧ್ಯಕ್ಷ ಮನುಕುಮಾರ್ ರೈ, ಇಲಾಖೆಯ ಹಿರಿಯ ಮಹಿಳಾ ಮೇಲ್ವಿಚಾರಕಿ ಗುರುಬಸಮ್ಮ, ಮೇಲ್ವಿಚಾರಕಿ ಸಾವಿತ್ರಮ್ಮ, ಸಿಬ್ಬಂದಿಗಳಾದ ವಿಮಲ, ಅನ್ಸನ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

error: Content is protected !!