ಬೇತು ಗ್ರಾಮದ ನಾಲ್ವರಲ್ಲಿ ಕೋವಿಡ್ ಸೋಂಕು ಪತ್ತೆ

29/09/2020

ಮಡಿಕೇರಿ ಸೆ. 29 : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಮಧ್ಯಾಹ್ನ ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯ ಬೇತು ಗ್ರಾಮದ ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ.
14 ಮತ್ತು 15 ವರ್ಷದ ಬಾಲಕರು, 18 ರ ಯುವತಿ ಹಾಗೂ 38 ವರ್ಷದ ಮಹಿಳೆಯಲ್ಲಿ ಕೋವಿಡ್ ದೃಢಪಟ್ಟಿದೆ.
ಮಡಿಕೇರಿ ಕನ್ನಿಕಾ ಲೇ ಔಟ್ ನ ಇಬ್ಬರು ಮಹಿಳೆಯರಲ್ಲಿ ಕೋವಿಡ್ ಕಾಣಿಸಿಕೊಂಡಿದೆ. ಮಕ್ಕಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Coronavirus Disease 2019 Graphic. (U.S. Air Force Graphic by Rosario “Charo” Gutierrez)