4 ಸ್ಥಾನಗಳಿಗೆ ಅ.28 ರಂದು ಚುನಾವಣೆ

September 30, 2020

ನವದೆಹಲಿ ಸೆ.30 : ಕರ್ನಾಟಕದ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಮುಂದಿನ ಅ.28 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಿದೆ.
ಅ.1ರಂದು ಪರಿಷತ್ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಅ.8ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆ ಅ.9, ನಾಮಪತ್ರ ಹಿಂದಕ್ಕೆ ಪಡೆಯಲು ಅ.12 ಕೊನೆಯ ದಿನವಾಗಿದೆ. ನ.2 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಅ.28ರಂದು ಚುನಾವಣೆ ನಡೆಯಲಿದೆ.
ಕಳೆದ ಜೂ.30 ಕ್ಕೆ ಚೌಡರೆಡ್ಡಿ ತೂಪಲ್ಲಿ, ಎಸ್.ವಿ.ಸಂಕನೂರ, ಶರಣಪ್ಪ ಮಟ್ಟೂರು ಮತ್ತು ಪುಟ್ಟಣ್ಣ ಅವರ ಅವಧಿ ಕೊನೆಗೊಂಡಿದ್ದು, ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.