ಸೋನು ಸೂದ್‍ಗೆ ವಿಶ್ವಸಂಸ್ಥೆ ಪ್ರಶಸ್ತಿ

30/09/2020

ನವದೆಹಲಿ ಸೆ.30 : ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ನಟ ಸೋನು ಸೂದ್ ಸಾರಿಗೆ ವ್ಯವಸ್ಥೆ ಮಾಡಿ ತಲುಪಿಸಿದ್ದು ಅವರ ಲೋಕೋಪಕಾರಿ ಕೆಲಸಕ್ಕಾಗಿ ವಿಶ್ವಸಂಸ್ಥೆ ಪ್ರತಿಷ್ಠಿತ ಎಸ್ ಡಿಜಿ ಪ್ರಶಸ್ತಿಯನ್ನು ನೀಡಿದೆ.
ಸೋನು ಸೂದ್ ಅವರಿಗೆ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ(ಯುಎನ್‍ಡಿಪಿ)ಯ ಪ್ರತಿಷ್ಠಿತ ಎಸ್‍ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ನೀಡಲಾಗಿದೆ.
‘ದಬಾಂಗ್’ ನಟ ನಿಸ್ವಾರ್ಥವಾಗಿ ಸಹಾಯ ಹಸ್ತ ಚಾಚಿ ಲಕ್ಷಾಂತರ ವಲಸಿಗರು, ವಿದೇಶಗಳಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆಸಿಕೊಳ್ಳುವ ಮೂಲಕ ಮಾನವೀಯತೆ ಮೆರೆದಿದ್ದರು.
ಇದಲ್ಲದೆ, ಅವರು ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಸಹ ಒದಗಿಸುತ್ತಿದ್ದಾರೆ. ಕೋವಿಡ್ 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅಗತ್ಯವಿರುವವರಿಗೆ ಉಚಿತ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದ್ದಾರೆ.