ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ : ಅಡ್ವಾಣಿ ಸೇರಿದಂತೆ ಎಲ್ಲಾ ಆರೋಪಿಗಳು ಖುಲಾಸೆ
30/09/2020

ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತ ಅಲ್ಲ. ಇದೊಂದು ಅಚಾನಕ್ ಘಟನೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.
ಕೋರ್ಟ್ ಈ ತೀರ್ಪು ಪ್ರಕಟಿಸುವ ಮೂಲಕ 28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲಾ ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದೆ.
ತೀರ್ಪು ನೀಡುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾ.ಸುರೇಂದ್ರ ಕುಮಾರ್ ಯಾದವ್ ಸೆ.16 ರಂದು ಸೂಚಿಸಿದ್ದ ಹಿನ್ನೆಲೆಯಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್, ಲಾಲು ಸಿಂಗ್, ಬಿಬಿ ಶರಣ್ ಸಿಂಗ್ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಉಳಿದ ಆರೋಪಿಗಳು ಕೋರ್ಟ್ ಕೊಠಡಿಗೆ ಹಾಜರಾಗಿದ್ದರು.
