ಬಲ್ಯಮಂಡೂರು ಗ್ರಾಮದಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆ : ಗ್ರಾಮಸ್ಥರಲ್ಲಿ ಆತಂಕ
30/09/2020

ಮಡಿಕೇರಿ : ದಕ್ಷಿಣ ಕೊಡಗಿನ ಬಲ್ಯಮಂಡೂರು ಗ್ರಾಮದಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದೆ. ಇಂದು ಬೆಳಗ್ಗೆ ಸ್ಥಳೀಯ ಬೆಳೆಗಾರ ಕೂಟ್ಟಂಗಡ ಜೋಯಪ್ಪ ಎಂಬುವವರ ಗದ್ದೆಯಲ್ಲಿ ಚಿರತೆಯ ಹೆಜ್ಜೆ ಗುರುತು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಅರಣ್ಯ ಇಲಾಖೆ ತಕ್ಷಣ ಚಿರತೆ ವಿರುದ್ಧ ಕಾರ್ಯಾಚರಣೆ ನಡೆಸಬೇಕೆಂದು ವಿರಾಜಪೇಟೆ ತಾಲ್ಲೂಕು ಬಿಜೆಪಿ ಕೃಷಿ ಮೋರ್ಚಾದ ಅಧ್ಯಕ್ಷ ಕೊಟ್ಟಂಗಡ ಅಯ್ಯಪ್ಪ ಒತ್ತಾಯಿಸಿದ್ದಾರೆ.

