ಸುಂಟಿಕೊಪ್ಪ ನಗರ ಬಿಜೆಪಿ ಯಿಂದ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಸುಂಟಿಕೊಪ್ಪ,ಸೆ.30: ಸುಂಟಿಕೊಪ್ಪ ನಗರ ಬಿಜೆಪಿ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನವನ್ನು ಆಚರಿಸಲಾಯಿತು.
ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸುಂಟಿಕೊಪ್ಪ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರುಗಳಾದ ಬಿ.ಕೆ.ಪ್ರಶಾಂತ್ ಹಾಗೂ ವಾಸು ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಪಕ್ಷದ ಸ್ಥಾಪಕ ಅಧ್ಯಕ್ಷರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಬಾವಚಿತ್ರಕ್ಕೆ ಪುಷ್ಪಾನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಪಿ.ಆರ್.ಸುನಿಲ್ ಕಮಾರ್, ಬಿಜೆಪಿ ಪಕ್ಷದ ಸ್ಥಾಪಕ ಅಧ್ಯಕ್ಷರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪಕ್ಷ ನಿಷ್ಠೆ, ಸಂಘಟನೆಯ ಬಗ್ಗೆ ಮಾಹಿತಿ ನೀಡಿದು. ತಾಲ್ಲೂಕು ಪಂಚಾಯಿತಿ ಸದಸ್ಯೆ ಓಡಿಯಪ್ಪನ ವಿಮಾಲಾವತಿ ಜನ್ಮದಿನವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಹ ಪ್ರಮುಖರಾದ ರಂಜಿತ್ ಪೂಜಾರಿ, ನಾಗೇಶ್ ಪೂಜಾರಿ, ಯುವಮೋರ್ಚಾ ಅಧ್ಯಕ್ಷ ಎಸ್.ವಿಘ್ನೇಶ್, ಓಬಿಸಿ ಅಧ್ಯಕ್ಷ ಸಿ.ಸಿ.ಸುನಿಲ್ ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ಐ.ಭವಾನಿ, ಕೃಷಿಮೋರ್ಚಾ ಅಧ್ಯಕ್ಷ ರಮೇಶ್ ಪಿಳ್ಳೈ, ಸಂದಿಫ್, ಎಸ್‍ಸಿ ಮೋರ್ಚಾ ಅಧ್ಯಕ್ಷ ಆನಂದ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
