ನಿಯಮ ಉಲ್ಲಂಘಿಸಿ ತೇಜಸ್ವಿ ರ‍್ಯಾಲಿ

01/10/2020

ಬೆಂಗಳೂರು ಅ. 1 : ಕೊರೊನಾ ನಿಯಮ ಉಲ್ಲಂಘಿಸಿ ಯಾವುದೇ ರಾಜಕೀಯ ರ್ಯಾಲಿ ಮಾಡಕೂಡದು ಎಂದು ಕೇಂದ್ರ ಸರ್ಕಾರ ಒತ್ತಿ ಹೇಳುತ್ತದೆ. ಆದರೆ ಅವರದ್ದೇ ಸರ್ಕಾರದ ಸಂಸದ ಇದೀಗ ಕೊರೊನಾ ನಿಯಮ ಉಲ್ಲಂಘಿಸಿ ಅದ್ಧೂರಿ ರ್ಯಾಲಿ ಮಾಡಿದ್ದಾರೆ. ಇದರಿಂದಾಗಿ ಸಾಮಾನ್ಯರಿಗೊಂದು, ಸಂಸದರಿಗೊಂದು ನಿಯಮವೇ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ಆಯ್ಕೆಯಾದ ಬಳಿಕ ದೆಹಲಿಯಿಂದ ವಾಪಸ್ಸಾಗಿದ್ದಾರೆ. ಈ ವೇಳೆ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದ್ದಾರೆ. ಅಲ್ಲದೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೇಜಸ್ವಿ ಸೂರ್ಯ ಅವರ ಮೆರವಣಿಗೆ ಮಾಡಿದ್ದಾರೆ. ನೂರಾರು ಜನ ಸೇರಿ ಮೆರವಣಿಗೆ ಮಾಡುವ ಮೂಲಕ ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ.