ಸಾಮೂಹಿಕ ಅತ್ಯಾಚಾರ : ಎಸ್‍ಐಟಿ ತನಿಖೆ

01/10/2020


ಲಕ್ನೋ ಸೆ.30 : ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಸಾವಿನ ಬಗ್ಗೆ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಈ ಘಟನೆ ಕುರಿತು ವಿಶೇಷ ತನಿಖಾ ತಂಡ (ಎಸ್‍ಐಟಿ) ತನಿಖೆ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ.
ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮೂವರು ಸದಸ್ಯರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಅಲ್ಲದೇ ಏಳು ದಿನಗಳಲ್ಲಿ ತನಿಖಾ ವರದಿಯನ್ನು ಸಲ್ಲಿಸುವ ಸೂಚಿಸಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ. “ಹತ್ರಾಸ್ ಸಾಮೂಹಿಕ ಅತ್ಯಾಚಾರ ಘಟನೆಯ ಅಪರಾಧಿಗಳನ್ನು ಬಿಡಲಾಗುವುದಿಲ್ಲ. ಘಟನೆಯ ತನಿಖೆಗಾಗಿ ಎಸ್?ಐಟಿ ರಚಿಸಲಾಗಿದೆ. ಮುಂದಿನ 7 ದಿನಗಳಲ್ಲಿ ತಂಡವು ವರದಿಯನ್ನು ಸಲ್ಲಿಸುತ್ತದೆ. ಅಲ್ಲದೇ ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.