ನಾಲ್ಕನೆಯ ಸ್ಥಾನ ಹೊಂದಿರುವ ಭಾರತದ ಪುರಾತನ ಆಲದ ಮರ

01/10/2020

ದೊಡ್ಡ ಆಲದ ಮರ ಬೆಂಗಳೂರಿನಿಂದ 28 ಕಿ.ಮೀ. ದೂರವಿರುವ . ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೇತೋಹಳ್ಳಿ 3 ಎಕರೆಯಲ್ಲಿ ಇಡೀ ಭಾರತದ ಪುರಾತನ ಆಲದ ಮರಗಳಲ್ಲೇ ನಾಲ್ಕನೆಯ ಸ್ಥಾನ ಹೊಂದಿರುವ ಪುರಾತನ ಆಳದಮರವಾಗಿದೆ. 400 ವರ್ಷಗಳಷ್ಟು ವಯಸ್ಸಾಗಿರುವ ಈ ವಿರಳ ಆಲದ ಮರಕ್ಕೆ ಇಡೀ ಭಾರತದ ಪುರಾತನ ಆಲದ ಮರಗಳಲ್ಲೇ ನಾಲ್ಕನೆಯ ಸ್ಥಾನ.ಆಂಧ್ರಪ್ರದೇಶದ ಮೆಹಬೂಬ್ ನಗರ, ಪಶ್ಚಿಮ ಬಂಗಾಳದ ಕೊಲ್ಕತ್ತ ಹಾಗೂ ತಮಿಳುನಾಡಿನ ಚೆನ್ನೈನಲ್ಲ್ಲಿ ಕ್ರಮವಾಗಿ ಮೊದಲ ಮೂರು ದೈತ್ಯ ಆಲದ ಮರಗಳಿವೆ.ಆಲದ ಮರದ ಎತ್ತರ ೯೫ ಅಡಿ. ಕೊಂಬೆಗಳು. ದೈತ್ಯ ಮರ ನಾಲ್ಕು ೩ ಎಕರೆಯಲ್ಲಿ ಆವರಿಸಿದೆ. ಜೋಲಾಡುವ ಸಾವಿರಾರು ಬೇರುಗಳದ್ದೇ ವಿಶಿಷ್ಟ ಆಕರ್ಷಣೆ. ಅವುಗಳ ಒಂದು ಭಾಗವನ್ನೇ ಚಚರವಾಗಿಸಿಕೊಂಡ ಮುನೇಶ್ವರ ಸ್ವಾಮಿ ದೇವಾಲಯ. ಹೆಮ್ಮರ ವೀಕ್ಷಿಸಲು ಬರುವವರು ದಣಿವಾರಿಸಿಕೊಳ್ಳಲು ಕಲ್ಲು ಬೆಂಚುಗಳು ಇವೆ. . ೨೦೦೦ರಲ್ಲಿ ಮರದ ಮುಖ್ಯ ಕಾಂಡವು ರೋಗಕ್ಕೆ ತುತ್ತಾಗಿ ನಶಿಸಿತು. ಮರ ಅನೇಕ ಕೊಂಬೆಗಳ ಪೋಷಣೆಯಿಂದ ವೇಗವಾಗಿ, ಅಷ್ಟೇ ಬಲಿಷ್ಠವಾಗಿ ಬೆಳೆಯುತ್ತಿದೆ. ಕೊಂಬೆಗಳು ನಿರಂತರ ಜಟೆಯಂತೆ ಬೇರು ಅರ್ಥಾತ್ ಬಿಳಲುಗಳನ್ನು ನೆಲದಾಳಕ್ಕೆ ಇಳಿಬಿಟ್ಟಿವೆ .