ಯೋಜನಾ ನಿರ್ದೇಶಕರಾಗಿ ಸಿ.ರಾಜು ಅಧಿಕಾರ ಸ್ವೀಕಾರ

01/10/2020

ಮಡಿಕೇರಿ ಅ.01 : ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಸಿ.ರಾಜು ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಸಿ.ರಾಜು ಅವರು ಈ ಹಿಂದೆ ಕೋಲಾರ ಜಿಲ್ಲೆ ಕೆಜಿಎಫ್ ಮತ್ತು ಬೀದರ್ ನಗರಸಭೆಯಲ್ಲಿ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹಾಗೆಯೇ ಮೈಸೂರು ಮಹಾನಗರ ಪಾಲಿಕೆಯಲ್ಲಿ ಉಪ ಆಯುಕ್ತರಾಗಿ ಆಡಳಿತ, ಹಾಗೆಯೇ ಮಂಡ್ಯ ಜಿಲ್ಲೆಯ ನಗರಾಭಿವೃದ್ಧಿ ಕೋಶದಲ್ಲಿ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.