ಜಿಲ್ಲೆಯ ಪ್ರತಿಷ್ಠಿತ ಸಂಸ್ಥೆಗಳಿಗೆ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

01/10/2020

ಮಡಿಕೇರಿ ಅ.01 : ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಜಿಲ್ಲೆಯ ಪ್ರತಿಷ್ಠಿತ ಸಂಸ್ಥೆಗಳಿಗೆ ಆಯ್ಕೆ ಮಾಡಲು ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಇವರನ್ನು ದೂ.ಸಂ.08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.