ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

October 1, 2020

ಮಡಿಕೇರಿ ಅ. 1 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಅಕ್ಟೋಬರ್, 31 ರಂದು ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿಯನ್ನು ಪ್ರತಿ ವರ್ಷವು ನೀಡಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಗಳಂತೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿಗಳನ್ನು ಜಿಲ್ಲಾ ಮಟ್ಟದಲ್ಲಿ ಆಹ್ವಾನಿಸಿ ಜಿಲ್ಲಾಧಿಕಾರಿ ಹಂತದಲ್ಲಿ ಪರಿಶೀಲಿಸಿ ಒಬ್ಬ ಸೂಕ್ತ ವ್ಯಕ್ತಿಯನ್ನು ಪ್ರಶಸ್ತಿಗೆ ಕಳುಹಿಸಬೇಕಾಗಿರುವುದರಿಂದ ಪ್ರಶಸ್ತಿ ಪಡೆಯಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್, 15 ಕೊನೆಯ ದಿನವಾಗಿದೆ. ಅರ್ಜಿಯನ್ನು ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552, ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ಮತ್ತು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-261261 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್ ಅವರು ತಿಳಿಸಿದ್ದಾರೆ.

error: Content is protected !!