ಅ. 2 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 151 ನೇ ಜನ್ಮ ವರ್ಷಾಚರಣೆ

01/10/2020

ಮಡಿಕೇರಿ ಅ.01 : ಜಿಲ್ಲಾಡಳಿತ, ನಗರಸಭೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಸರ್ವೋದಯ ಸಮಿತಿ ಜಂಟಿ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 151 ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಅಕ್ಟೋಬರ್, 02 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಗಾಂಧಿ ಮಂಟಪದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡುವ ಸರಳ ಕಾರ್ಯಕ್ರಮ ನಡೆಯಲಿದೆ.