ಕೊಡಗಿನಲ್ಲಿ 42,133 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ
01/10/2020

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ 42,133 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, 38,833 ಮಂದಿಗೆ ನೆಗೆಟಿವ್ ವರದಿ ಬಂದಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಕೋವಿಡ್ ಆಸ್ಪತ್ರೆ 102, ಕೋವಿಡ್ ಕೇರ್ ಸೆಂಟರ್ ನಲ್ಲಿ 62 ಮತ್ತು
ಹೋಂ ಐಸೋಲೇಶನ್ ನಲ್ಲಿ 265 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಹೊಸದಾಗಿ ಇಂದು 28 ನಿಯಂತ್ರಿತ ಪ್ರದೇಶಗಳನ್ನು ತೆರೆಯಲಾಗಿದೆ ಎಂದು ಹೇಳಿದ್ದಾರೆ.