ಭೂಸುಧಾರಣೆ ಕಾಯ್ದೆ ಜಾರಿಗೆ ಸುಗ್ರಿವಾಜ್ಞೆ

October 2, 2020

ಬೆಂಗಳೂರು ಅ.2 : ರೈತರ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ(ಕಾರ್ಮಿಕ ತಿದ್ದುಪಡಿ ಕಾಯ್ದೆ) ಜಾರಿಗೊಳಿಸಲು ಸುಗ್ರೀವಾಜ್ಞೆ ಹೊರಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಈ ಕಾಯ್ದೆಗಳನ್ನು ಅಂಗೀಕರಿಸಲಾಗಿತ್ತು. ಆದರೆ ವಿಧಾನ ಪರಿಷತ್ ನಲ್ಲಿ ಇನ್ನೂ ಅಂಗೀಕಾರಗೊಂಡಿಲ್ಲ. ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ಪರಿಷತ್ ನಲ್ಲಿ ಇನ್ನೂ ಅಂಗೀಕಾರಗೊಂಡಿಲ್ಲ. ಆದರೆ ಕಾರ್ಮಿಕ ತಿದ್ದುಪಡಿ ಕಾಯ್ದೆ ಪರಿಷತ್ ನಲ್ಲಿ ಸೋಲನುಭವಿಸಿತ್ತು. ಪರಿಷತ್ ನಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಹೀಗಾಗಿ ಈ ವಿವಾದಿತ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೊರೆ ಹೋಗಿದೆ.
ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

error: Content is protected !!